ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 7
ಬೌದ್ಧಸಂನ್ಯಾಸಿಯಾದ ಅಶ್ವಘೋಷನು ಸ್ವಮತಪ್ರಚಾರ ಮತ್ತು ತತ್ತ್ವೋಜ್ಜೀವನಕ್ಕಾಗಿ ಕಾವ್ಯದ ಮಾಧ್ಯಮವನ್ನು ಬಳಸಿಕೊಂಡಿರುವುದು ಅವನ ಮಾತುಗಳಿಂದಲೇ ಸ್ಪಷ್ಟವಾಗಿದೆ. ವಿಶೇಷತಃ ಕಹಿಯಾದ ಔಷಧವನ್ನು ಸಿಹಿಯಾದ ಜೇನಿನ ಅನುಪಾನದಿಂದ ಉಣಿಸುವ ದೃಷ್ಟಾಂತ ಮುಂದಿನ ಎಷ್ಟೋ ಆಲಂಕಾರಿಕರಿಗೆ ಅಚ್ಚುಕಟ್ಟಾಗಿ ಒದಗಿಬಂದಿತು.[1]
